ಮುಡಾ ಪ್ರಕರಣ: ವಿಚಾರಣೆ ವೇಳೆ ಇಡಿ ಅಧಿಕಾರಿಗಳಿಗೆ 500 ಕ್ಕೂ ಹೆಚ್ಚು ದಾಖಲೆ ಕೊಟ್ಟ ಸ್ನೇಹಮಯಿ ಕೃಷ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಇಡಿ ಸಮನ್ಸ್​ ನೀಡಿತ್ತು. ಈ ಹಿನ್ನಲೆ ಇಂದು ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದರು.

ಸದ್ಯ ವಿಚಾರಣೆ ಮುಗಿಸಿ ಹೊರಬಂದ ಸ್ನೇಹಮಯಿ ಕೃಷ್ಣ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿರುವುದಾಗಿ ಹೇಳಿದ್ದಾರೆ.

ವಿಚಾರಣೆ ಮುಗಿಸಿ ಹೊರಬಂದ ದೂರುದಾರ ಸ್ನೇಹಮಯಿ ಕೃಷ್ಣ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗ್ಗೆಯಿಂದ ಸಂಜೆವರೆಗೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಗಳಿಗೆ ಯಾವ ಕ್ಲಾರಿಫಿಕೇಷನ್ ಬೇಕೋ ಅದೆಲ್ಲಾ ಕೊಟ್ಟಿದ್ದೀನಿ. ದಾಖಲೆ, ಸಾಕ್ಷಿಗಳ ಬಗ್ಗೆ ಮಾಹಿತಿ ಕೇಳಿದ್ರು, ಅದೆಲ್ಲವನ್ನೂ ಕೊಟ್ಟಿದ್ದೇನೆ. ಇಡಿ ಅಧಿಕಾರಿಗಳು ಮತ್ತೆ ಕರೆದರೆ ವಿಚಾರಣೆಗೆ ಬರುವೆ ಎಂದು ಹೇಳಿದ್ದಾರೆ.

ಮುಡಾ ಹಗರಣ ಸಂಬಂಧ 500ಕ್ಕೂ ಹೆಚ್ಚು ದಾಖಲೆಗಳನ್ನು ಕೊಟ್ಟಿದ್ದೆ. ನಾನು ನೀಡಿದ್ದ ದಾಖಲೆ ಸಂಬಂಧ ಇಡಿ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದರು. ಮುಡಾದಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ. ಕನ್ನಡದಲ್ಲಿರುವ ದಾಖಲೆಗಳ ಬಗ್ಗೆಯೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಮುಡಾಗೆ ಸೈಟ್ ವಾಪಸ್ ನೀಡಿದರೆ ಅದು ಸಾಕ್ಷಿ ನಾಶ ಬರಲ್ಲ. ವಾಪಸ್ ಕೊಟ್ಟಿರೋದೇ ಸಾಕ್ಷಿ ಆಗುತ್ತೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಹೀಗಾಗಿ ಇದಕ್ಕೆ ಮನಿ ಲ್ಯಾಂಡರಿಂಗ್‌ ಆ್ಯಕ್ಟ್‌ ಅನ್ವಯವಾಗುತ್ತೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!