ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರೋ ರಿಟ್ ಅರ್ಜಿ ವಿಚಾರಣೆ ಸೋಮವಾರ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ, ಸೆಪ್ಟೆಂಬರ್ 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ.
ಹೀಗಾಗಿ ಸೋಮವಾರ ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ. ಈ ಮಧ್ಯೆ, ಮುಡಾ ಟೆನ್ಶನ್‌ನಲ್ಲಿಯೋ ಏನೋ ಸಚಿವ ಬೈರತಿ ಸುರೇಶ್ ಟೆಂಪಲ್ ರನ್ ಮಾಡಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಮತ್ತು ನಂಜನಗೂಡಿನ ಶ್ರೀಕಂಠೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.