Saturday, December 20, 2025

ಮುಡಾ ಕೇಸ್‌ | ಸಿಎಂ ಸಿದ್ದರಾಯ್ಯಗೆ ಇಂದು ಬಿಗ್‌ಡೇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್‌ಚಿಟ್‌ಗೆ ನ್ಯಾಯಾಲಯ ಇಂದು (ಡಿ.18) ತೀರ್ಪು ನೀಡಲಿದೆ.

ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದ್ರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ಅತೀ ದೊಡ್ಡ ಸಂಕಷ್ಟ ಎದುರಾಗಲಿದೆ.

ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ‌ ಹೊರಬೀಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಯವರು ಮೂಡಾದಿಂದ ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು.

error: Content is protected !!