ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ನ.6 ) ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ಸೋಮವಾರ ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ.