ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಲೋಕಾಯುಕ್ತದಿಂದ ವಿಚಾರಣೆ ಎದುರಿಸಿದ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಲೋಕಾಯುಕ್ತ ನಂತರ ಸಿದ್ದರಾಮಯ್ಯ ಅವರಿಗೆ ಇಡಿ ವಿಚಾರಣೆಯ ಭಯ ಶುರುವಾಗಿದೆ. ಮುಡಾ ಮಾಜಿ ಅಧ್ಯಕ್ಷ ಮರೀಗೌಡ ಸೇರಿದಂತೆ ಏಳು ಮಂದಿಗೆ ಸಮನ್ಸ್ ನೀಡಿದೆ.
ತುರ್ತು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಮುಡಾ ಮಾಜಿ ಆಯುಕ್ತ ದಿನೇಶ್, ನಟೇಶ್‌ಗೂ ಸಮನ್ಸ್ ನೀಡಿದೆ. ಇವರೆಲ್ಲರ ವಿಚಾರಣೆ ಬಳಿಕ ಸಿಎಂಗೆ ಇಡಿ ನೋಟಿಸ್ ನೀಡುವ ಸಾಧ್ಯತೆ ಇದೆ.