ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂಗೆ ಪ್ರಾಸಿಕ್ಯೂಷನ್ ಅನುಮತಿಸಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆಗಸ್ಟ್ 29ರಂದು ನಡೆದಿದ್ದು, ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘಿ ವಿಸ್ತೃತ ವಾದ ಮಂಡಿಸಿದ್ದರು. ಈ ಹಂತದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಪರ ವಕೀಲ ತುಷಾರ್ ಮೆಹ್ರಾ ಅವರು ಶನಿವಾರ ತಮ್ಮ ವಾದವನ್ನು ಮಂಡಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 31, 10:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಅಲ್ಲದೆ ಈ ಹಿಂದಿನ ಮಧ್ಯಂತರ ಆದೇಶವನ್ನು ಅನುಸರಿಸಿ, ರಾಜ್ಯಪಾಲರ ಕ್ರಮಗಳನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ ಮತ್ತು ಸಿದ್ದರಾಮಯ್ಯ ಅವರ ಭವಿಷ್ಯದ ಬಗ್ಗೆ ನಿರ್ಧರಿಸಲಿದೆ.