ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟೇಶ್ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್‌ರನ್ನು ಬಂಧಿಸುವ ಸಾಧ್ಯತೆ ಇದೆ.