ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಾಮೈದ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ ಅವರು ಜಾರಿ ನಿರ್ದೇಶನಾಲಯದ (ಇ.ಡಿ.) ಎದುರು ಹಾಜರಾಗಿ, ವಿಚಾರಣೆ ಎದುರಿಸಿದರು.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಲೋಕಾಯುಕ್ತ ಪೊಲೀಸರು ಹಾಗೂ ಇ.ಡಿ ದಾಖಲಿಸಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಮಲ್ಲಿಕಾರ್ಜುನಸ್ವಾಮಿ ಅವರು 3ನೇ ಆರೋಪಿಯಾಗಿದ್ದಾರೆ.
ಇದರಂತೆ ಪ್ರಕರಣದ ವಿಚಾರಣೆಗೆ ಬರುವಂತೆ ಇ.ಡಿ ಅಧಿಕಾರಿಗಳು ಇತ್ತೀಚೆಗೆ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ, ಸೋಮವಾರ ಬೆಂಗಳೂರಿನ ಶಾಂತಿನಗರದಲ್ಲಿನ ಇ.ಡಿ. ಕಚೇರಿಯಲ್ಲಿ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆಗೆ ಹಾಜರಾದರು. ಸತತ ನಾಲ್ಕು ಗಂಟೆಗಳ ವಿಚಾರಣೆ ಇದಾಗಿತ್ತು.