‘ಮುಡಾ’ ಸಂಕಷ್ಟದಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದ ಸಂಕಷ್ಟದಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್ ಎದುರಾಗಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಿದ್ದರಾಮಯ್ಯ ವಿರುದ್ಧ ಇಡಿಗೂ ದೂರು ನೀಡಿದ್ದಾರೆ.

ಮುಡಾದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಇಡಿಗೆ 16 ಪುಟಗಳ ಇ-ಮೇಲ್ ಹಾಗೂ ಪತ್ರ ಬರೆಯುವ ಮೂಲಕ ಜಾರಿ ನಿರ್ದೇಶನಾಲಯದ ಬೆಂಗಳೂರು ನಿರ್ದೇಶಕರಿಗೆ ದೂರು ನೀಡಿದ್ದಾರೆ.ಮನಿ ಲ್ಯಾಂಡರಿಂಗ್ ಆ್ಯಕ್ಟ್​ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಪತ್ನಿಯ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಪತ್ನಿಗೆ ಅಕ್ರಮವಾಗಿ ಸೈಟ್‌ ಹಂಚಿಕೆ ಮಾಡಿದ್ದಾರೆ ಅನ್ನೋ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಹಗರಣ ಸಂಬಂಧ ನಿನ್ನೆಯಷ್ಟೇ ಸಿಎಂ ಹಾಗೂ ಪತ್ನಿ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು.

ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಬ್ಬಂದಿ ಸಭೆ ನಡೆಸಿದ ಎಸ್‌ಪಿ ಉದೇಶ್‌, ತನಿಖೆಗಾಗಿ ನಾಲ್ಕು ತಂಡ ರಚನೆ ಮಾಡಿದ್ದಾರೆ. ಮೈಸೂರು ಲೋಕಾಯುಕ್ತ ಎಸ್​ಪಿ ಉದೇಶ್​​​, ಡಿವೈಎಸ್​ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್​ಪಿ ಮ್ಯಾಥ್ಯೂ ಥಾಮಸ್​​​ ಹಾಗೂ ಇನ್ಸ್​ಪೆಕ್ಟರ್​​ ಒಳಗೊಂಡ ನಾಲ್ಕು ತನಿಖಾ ತಂಡಗಳ ರಚನೆ ಮಾಡಲಾಗಿದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!