ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.
ಅಕ್ರಮವಾಗಿ ಒತ್ತುವರಿ ಜಮೀನು ಗುರುತಿಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬವರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.
ಇತ್ತೀಚೆಗೆ ಮೈಸೂರು ಮುಡಾ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಭೂ ಮಂಜೂರಾತಿ ಆರೋಪದಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು. ಸಿಎಂ ಸಿದ್ದರಾಮಯ್ಯ, ಪತ್ನಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂಮಾಲೀಕ ದೇವರಾಜು ಹಾಗೂ ಕುಟುಂಬದವರ ವಿರುದ್ಧ ಸ್ನೇಹಮಯಿ ಕೃಷ್ಣ ಎಂಬ ಸಾಮಾಜಿಕ ಕಾರ್ಯಕರ್ತ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮುಡಾ ಅಕ್ರಮ ಕುರಿತು ದೂರು ದಾಖಲಿಸಿದ್ದಾರೆ. ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂದು ದೂರಿದ್ದಾರೆ.