ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಸಿದ್ದಾರೆ.
ಅಕ್ರಮ ಪರಿತ್ಯಾಜನ ಪತ್ರ ರಾಜ್ಯಪಾಲರ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಅವರು ಕಿಡಿಕಾರಿದರು. ಮೈಸೂರು ನಗರಾಭಿವೃದ್ಧಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಕೆ.ಸಿ.ಉಮೇಶ್ ಅವರು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಪರಿತ್ಯಾಜನ ಪತ್ರ ನೋಂದಣಿ ಮಾಡಿಸಿಕೊಂಡಿದ್ದಾರೆ.
ಕೆಸರೆ ಗ್ರಾಮದ ಸರ್ವೆ ನಂಬರ್ 464ರ 3.16 ಎಕರೆ ಜಮೀನಿಗೆ ವರ್ಗಾವಣೆ ಪತ್ರ ದಾಖಲಾಗಿದೆ. ಪರಿತ್ಯಾಜನ ಪತ್ರ ನಿಮ್ಮ ಹೆಸರಿನಲ್ಲಿ ನೋಂದಾಯಿಸಲಾಗುತ್ತದೆ. ಆದ್ದರಿಂದ ಕೂಡಲೇ ಉಮೇಶ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಈ ದೂರಿನಲ್ಲಿ ತಿಳಿಸಲಾಗಿದೆ.