ಮುಡಾ ಹಗರಣ ಕೇಸ್‌; ಇಂದು ಸಿಎಂ ಸಿದ್ದರಾಮಯ್ಯಗೆ ನಿರ್ಣಾಯಕ ದಿನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ದಿನ. ಮುಡಾ ಹಗರಣಕ್ಕೆ  ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ನೀಡಲಿದೆ.

ಸುಮಾರು ನಾಲ್ಕು ತಿಂಗಳುಗಳ ಕಾಲ ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಮತ್ತು ಸಿಎಂ ಪತ್ನಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಅಂತಿಮ ವರದಿ ಸಲ್ಲಿಸಿತ್ತು. ಆದರೆ ಅಂತಿಮ ವರದಿ ಪ್ರಶ್ನಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅಂತಿಮ ವರದಿಯಲ್ಲಿ ಇರುವ ಲೋಪದೋಷಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ಇಂದು ಆದೇಶ ನೀಡಲಿದೆ.

ಆದರೆ ಸ್ನೇಹಮಯಿ ಕೃಷ್ಣ ಅವರ ಜೊತೆಗೆ ಇ.ಡಿ ಅಧಿಕಾರಿಗಳು ಬಿ ರಿಪೋರ್ಟ್ ವಿರುದ್ಧ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇ.ಡಿಯ ತಕರಾರು ಅರ್ಜಿ ಮಾನ್ಯತೆಯ ವಾದ-ಪ್ರತಿವಾದ ನಡೆಯಲಿದೆ. ಈ ನಡುವೆ ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಒಪ್ಪುತ್ತಾ ಅಥವಾ ಮರು ತನಿಖೆಗೆ ಆದೇಶ ನೀಡುತ್ತಾ ಎಂದು ಕಾದುನೋಡಬೇಕಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!