ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ಆಗಿರೋದು ಬಹಿರಂಗವಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಭೂ ನೋಂದಣಿ ರದ್ದು ಹಾಗೂ ಹಸ್ತಾಂತರದಲ್ಲಿ ಅಧಿಕಾರಿಗಳು ನಿಯಮ ಉಲ್ಲಂಘಿಸಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಮುಡಾ ಆಯುಕ್ತರು ಹಾಗೂ ಕಂದಾಯ ಅಧಿಕಾರಿಗಳು ನಿಯಮ ಉಲ್ಲಂಘಿಸಿರುವುದು ಕಂಡು ಬಂದಿದೆ. ಅಪರಾಧ ಎಸಗಿದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎನ್ನಲಾಗಿದೆ.