ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾದಲ್ಲಿ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಪೊಲೀಸರು ನೊಟೀಸ್ ಜಾರಿ ಮಾಡಿದೆ.
ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವಿಚಾರಣೆಗೆ ನಾನು ಹಾಜರಾಗುತ್ತೇನೆ ಎಂದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹುರಳಿಕುಪ್ಪಿಯಲ್ಲಿ ತಿಳಿಸಿದರು.
ಮುಡಾದಲ್ಲಿ ನಡೆದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೊಟೀಸ್ ನೀಡಲಾಗಿದೆ.ನವೆಂಬರ್ 6 ರಂದು ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ.
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಕಳೆದ 40ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯರ ಮೊದಲ ವಿಚಾರಣೆ ಇದಾಗಿದೆ.