ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳಿದ್ದರೂ ಸುಳ್ಳು ವರದಿ ಸಲ್ಲಿಕೆ ಮಾಡಿದ್ದಾರೆಂದು ಮೂವರು ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಮುಡಾ ಹಗರಣಕ್ಕೆ ತನಿಖೆಯಲ್ಲಿ ರಾಜಕಾರಣಿಗಳ ಪ್ರಭಾವಕ್ಕೆ ಒಳಗಾಗಿ ಕ್ರಮ ಕೈಗೊಂಡಿಲ್ಲ. ಸುಳ್ಳು ದಾಖಲೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಖರ್ಬಿಕರ್, ಪೊಲೀಸ್ ಮಹಾ ನಿರೀಕ್ಷಕ ಸುಬ್ರಹ್ಮಣೇಶ್ವರರಾವ್, ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶ್ ವಿರುದ್ಧ ದೂರು ನೀಡಿದ್ದಾರೆ.