ಮುಡಾ ಹಗರಣ: ಸಿಎಂ ಸಿದ್ಧರಾಮಯ್ಯ ವಿರುದ್ಧದ ಕೇಸ್ ವಿಚಾರಣೆ ಮುಂದೂಡಿದ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಪ್ರಕರಣದ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 21ಕ್ಕೆ ಮುಂದೂಡಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು.

ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಆಗಸ್ಟ್ 20ರಂದು ವಿಚಾರಣೆಗೆ ಸ್ವೀಕರಿಸುವುದಾಗಿ ತಿಳಿಸಿ, ಆಗಸ್ಟ್ 21ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!