ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ ಪ್ರಕರಣಕ್ಕೆ ಸಂಬಂಧಪಟ್ಟಂತೆ 142 ಸ್ಥಿರಾಸ್ತಿಗಳ ಮುಟ್ಟುಗೋಲು ಮಾಡಿಕೊಂಡಿದೆ.
ಅಂದಾಜು 300 ಕೋಟಿ ಮಾರುಕಟ್ಟೆ ಮೌಲ್ಯದ ಸ್ಥಿರಾಸ್ತಿಗಳು ಮುಟ್ಟಗೋಲು ಹಾಕಿಕೊಳ್ಳಲಾಗಿದೆ ಎಂದು ಎಕ್ಸ್‌ನಲ್ಲಿ ಇಡಿ ಮಾಹಿತಿ ನೀಡಿದೆ.
ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಏಜೆಂಟ್‌ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲಿ ಸೈಟ್ ಗಳು ನೋಂದಾಣಿಯಾಗಿತ್ತು ಎಂಧು ಇಡಿ ಮಾಹಿತಿ ನೀಡಿದೆ.
ಮುಡಾ ಸೈಟ್ ಹಗರಣ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದ ಇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟೆ ಮೌಲ್ಯದ ಆಸ್ತಿ ಜಪ್ತಿಯಾಗಿದೆ.
ಮೈಸೂರಿನ ಗಂಗರಾಜು ಹಾಗೂ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಹಿನ್ನಲೆಯಲ್ಲಿ ತನಿಖೆ ಆರಂಭ ಮಾಡಿತ್ತು. ಈ ಹಿಂದೆ ಮೈಸೂರು ಮುಡಾ ಕಚೇರಿ ಸೇರಿ ಹಲವಡೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು.