ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು.
ಆ ಅರ್ಜಿ ಸಂದರ್ಭದಲ್ಲಿ ಇದನ್ನು ಮುಂದೂಡಬೇಕು ಎಂದು ಹೇಳಿಲ್ಲ ಎನ್ನುವ ಮಾಹಿತಿಯನ್ನು ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ತಿಳಿಸಿದರು. ಅಲ್ಲದೇ, ಇಂದು ಲೋಕಾಯುಕ್ತ ವರದಿ ಪಡೆಯಿರಿ ಎಂದು ರಾಘವನ್ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಇವತ್ತು ಅರ್ಜಿ ವಿಚಾರಣೆ ನಡುತ್ತಿಲ್ಲ. ಹೀಗಾಗಿ ಡಿ.10 ಕ್ಕೆ ಮುಂದೂಡಲಾಗುವುದು ಎಂದು ಆದೇಶಿಸಿದರು.