Tuesday, November 18, 2025

ಮುಡಾ ಹಗರಣ: ಕೋರ್ಟ್ ಗೆ ತನಿಖಾ ಸ್ಥಿತಿಗತಿ ವರದಿ ಸಲ್ಲಿಕೆ, ವಿಚಾರಣೆ ಮುಂದೂಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಶನಿವಾರ ತನಿಖಾ ಸ್ಥಿತಿಗತಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ನಡೆಸಿತು.

ಮುಡಾ ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರರು ಹಾಗೂ ಜಾರಿ ನಿರ್ದೇಶನಾಲಯ ಹಾಗೂ ಲೋಕಾಯುಕ್ತ ಪರವಾಗಿ ವಿಶೇಷ ಪಬ್ಲಿಕ್ ಪ್ಲಾಸಿಕ್ಯೂಟರ್ (SPP) ಉಪಸ್ಥಿತರಿದ್ದರು. ಸಂಕ್ಷಿಪ್ತ ವಿಚಾರಣೆಯ ಸಮಯದಲ್ಲಿ, ಲೋಕಾಯುಕ್ತದ SPP ಮುಡಾ ಸಂಬಂಧಿತ ಆರೋಪಗಳ ಕುರಿತು ನಡೆಯುತ್ತಿರುವ ತನಿಖೆಯ ಸ್ಥಿತಿಗತಿ ವರದಿಯನ್ನು ಸಲ್ಲಿಸಿದರು.

ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ಪ್ರಾಸಿಕ್ಯೂಟರ್, ಹೆಚ್ಚಿನ ವಿವರವಾದ ವರದಿ ಸಲ್ಲಿಸಲು ಹೆಚ್ಚಿನ ಸಮಾಯವಕಾಶವನ್ನು ಕೋರಿದರು. ಸಲ್ಲಿಕೆಯನ್ನು ಸ್ವೀಕರಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿತು.

error: Content is protected !!