ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಸ್ವೀಕರಿಸಿದರು.
ಪ್ರಕರಣದ ಕುರಿತು ರಾಜ್ಯ ಸರ್ಕಾರ 2024ರ ಜುಲೈನಲ್ಲಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚಿಸಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಆರು ತಿಂಗಳೊಳಗೆ ವರದಿ ನೀಡುವಂತೆಯೂ ಸೂಚನೆ ನೀಡಿತ್ತು.
ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದಿದ್ದು, ಪ್ರಕರಣ ಭಾರಿ ಸದ್ದು ಮಾಡಿತ್ತು.