ಹೊಸದಿಗಂತ ವರದಿ,ಮೈಸೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಬಹುಕೋಟಿ ಹಗರಣಕ್ಕೆ ಸಂಬoಧಿಸಿದoತೆ ಇಬ್ಬರು ಮಾಜಿ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರಿಗೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ದೂರು ನೀಡಿದ್ದಾರೆ.
ಮುಡಾ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತವಾಗಿ ದೂರು ನೀಡಿದ್ದಾರೆ. ಮುಡಾದಲ್ಲಿ ನಡೆದಿರುವ ಬದಲಿ ನಿವೇಶನ ಹಂಚಿಕೆಯ ಬಹುಕೋಟಿ ಹಗರಣದಲ್ಲಿ ಮುಡಾ ಈ ಇಬ್ಬರು ಮಾಜಿ ಆಯುಕ್ತರು ಭಾಗಿಯಾಗಿದ್ದಾರೆ. ಕೂಡಲೇ ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿ, ಅವರನ್ನು ಬಂಧಿಸಬೇಕು. ಈ ಸಂಬoಧ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಅಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ಕಾನೂನು ಬಾಹಿರವಾಗಿ ಹಾಗೂ ಅಕ್ರಮವಾಗಿ ೫೦:೫೦ ಅನುಪಾತದಲ್ಲಿ ಸರಿ ಸುಮಾರು ೫.೦೦ ಲಕ್ಷ ಚ.ಅ. ಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬoದ ಹಿನ್ನಲೆಯಲ್ಲಿ ಅಂತಹ ಆದೇಶಗಳನ್ನು ರದ್ದುಗೊಳಿಬೇಕು. ಹಾಗೂ ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ, ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿರವರ ವಿರುದ್ಧ ಮತ್ತು ಇಂತಹ ಪ್ರಕರಣಗಳಲ್ಲಿ ಭಾಗಿಯಾದಂತಹ ಇತರೆ ಅಧಿಕಾರಿ ವರ್ಗದವರ ಮೇಲೆ ಸೂಕ್ತ ತನಿಖೆ ನಡೆಸಿ ಸರಿಯಾದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಪತ್ರ ಬರೆದಿದ್ದರೂ ಸಹ, ಈ ತನಕ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
ಇoತಹ ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು ೫,೦೦೦ ಕೋಟಿಗಳಷ್ಟು ನಷ್ಟ ಉಂಟಾಗಿರುತ್ತದೆ. ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವoತಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಈ ಹಿಂದಿನ ಆಯುಕ್ತರಗಳಾದ ನಟೇಶ್, ಕೆ.ಎ.ಎಸ್ ಮತ್ತು ದಿನೇಶ್ ಕುಮಾರ್ ಜಿ.ಟಿ. ಕೆ.ಎ.ಎಸ್ ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ. ಇವರ ವಿರುದ್ಧ ತನಿಖೆ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಿ. ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ.