ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಮೈಸೂರು ಲೋಕಾಯುಕ್ತ ಕ್ಲೀಚ್ಚಿಟ್ ನೀಡಿದೆ.
ಇನ್ನು ಲೋಕಾಯುಕ್ತ ವರದಿಗೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್ ಮಾತನಾಡಿ, ಲೋಕಾಯುಕ್ತ ಅಧಿಕಾರಿಗಳು ವರದಿ ನಾಳೆ ಕೊಡುತ್ತಿದ್ದು, ಅವರು ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಾರೆ. ಸಿಎಂ ಸಿದ್ದರಾಮಯ್ಯನವರ ಕುಟುಂಬದವರು ಮುಗ್ಧರು. ಕ್ಲೀನ್ಚೀಟ್ ಅಲ್ಲ, ನಿರ್ಮಾ ಪೌಡರ್ ಹಾಕಿ ತೊಳೆದಿದ್ದಾರೆ ಎಂದು ಲೋಕಾಯುಕ್ತ ವರದಿಗೆ ವ್ಯಂಗ್ಯವಾಡಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ಏನು ಇಲ್ಲ ಅಂದ್ರೆ ದುಬಾರಿ ವಕೀಲರನ್ನ ಏಕೆ ಕರೆ ತಂದ್ರಿ? ಹಳ್ಳಿಯ ವಕೀಲರಿಂದ ಕೇಸ್ ಎದುರಿಸಬಹುದಿತ್ತು ಅಲ್ವಾ ? ಇದು ಮುಚ್ಚುಹಾಕುವ ಹುನ್ನಾರ. ಪೊಲೀಸ್ ಅಧಿಕಾರಿಗೆ ವರ್ಗಾವಣೆ, ಪ್ರಮೋಷನ್ ಬೇಕು. ಅದಕ್ಕೆ ಹೀಗೆ ಮಾಡಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಮಾತ್ರ ಸತ್ಯ ಹೊರಗಡೆ ಬರುತ್ತೆ. ಲೋಕಾಯುಕ್ತ ಅಧಿಕಾರಿಗಳು ವರದಿ ನಾಳೆ ಕೊಡ್ತಿದ್ದಾರೆ. ಅವರು ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಾರೆ. ಸಿಎಂ ಸಿದ್ದರಾಮಯ್ಯನವರ ಕುಟುಂಬದವರು ಮುಗ್ಧರು. ಕ್ಲೀನ್ಚೀಟ್ ಅಲ್ಲ, ನಿರ್ಮಾ ಪೌಡರ್ ಹಾಕಿ ತೊಳೆದಿದ್ದಾರೆ ಎಂದು ಕಿಡಿಕಾರಿದರು.
ಇದು ಪೂರ್ವ ನಿಯೋಜಿತವಾದ ವರದಿ. ತಪ್ಪಿಲ್ಲ ಅಂದರೆ 14 ಸೈಟ್ ಯಾಕೆ ವಾಪಸ್ ಕೊಟ್ಟರು? A1, A2, A3 ತಪ್ಪಿಲ್ಲ ಅಂತ ಲೋಕಾಯುಕ್ತ ಹೇಳುತ್ತೆ. ಲೇಔಟ್ ಅಕ್ರಮ, ಅದು ಅವರಿಗೆ ಗೊತ್ತೇ ಇಲ್ಲ ಅಂತಾರೆ. 50:50 ಸೈಟ್ ಬೇಕು ಅಂದಾಗ ಮಾತ್ರ ನೋಡಿದ್ದಾರೆ. ಸಿದ್ದರಾಮಯ್ಯ ಒಂದು ಫೋನ್ ಕಾಲ್ ಕೂಡ ಮಾಡಿಲ್ಲ. ಸಿದ್ದರಾಮಯ್ಯನವರು ಒಂದು ಪತ್ರ ಕೂಡ ಬರೆದಿಲ್ಲ. ಸಿಎಂ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಳ್ಳೋಕೆ ಮೂರ್ಖರಾ? ಎಂದರು.
ಲೋಕಾಯುಕ್ತ ಬಿ ರಿಪೋರ್ಟ್ನಿಂದ 100% ಬೇಜಾರಾಗಿದೆ. ನಮಗಿಂತ ಜಾಸ್ತಿ 200% ಕಾಂಗ್ರೆಸ್ನ ಕೆಲವರಿಗೆ ಬೇಜಾರು. ಸಿಎಂ ಆಗಬೇಕೆಂಬ ಕನಸು ಇಟ್ಟುಕೊಂಡವರಿಗೆ ನಿದ್ರೆ ಇಲ್ಲ. ಸಿಎಂ ಆಗಬೇಕು ಎಂಬುವವರ ಕನಸು ನುಚ್ಚು ನೂರಾಗಿದೆ. ನಾಳೆ ಬೆಂಗಳೂರಿನಲ್ಲಿ ನಾವು 10 ಜನ ಸಭೆ ಸೇರುತ್ತಿದ್ದೇವೆ. ಸಭೆಯಲ್ಲಿ ಮುಡಾ ಪ್ರಕರಣದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.