ಮೂಡಾ‌ ಹಗರಣ ರಾಜಕೀಯ ಪ್ರೇರಿತ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ:

ಮೂಡಾ ಪ್ರಕರಣ ರಾಜಕೀಯ ದುರುದ್ದೇಶದಿಂದ ಮಾಡಮಾಗುತ್ತಿದೆ.ರಾಜ್ಯಪಾಲರ ಕಚೇರಿ‌ ಬಿಜೆಪಿಯ ಪ್ರಾದೇಶಿಕ ಕಚೇರಿಯಾಗಿ ಮಾರ್ಪಟ್ಟಿದ್ದು, ಎಲ್ಲೆಲ್ಲಿ ಬಿಜೆಪಿ ಬಲಹೀನವಾಗಿದೆ ಅಲ್ಲಲ್ಲಿ ರಾಜಭವನದ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು, ಮಹಾರಾಷ್ಟ್ರ, ‌ಪ. ಬಂಗಾಳದಲ್ಲಿ ಕೇರಳದಲ್ಲಿ ಏನು ನಡೆಯುತ್ತಿದೆ ? ತಮಿಳುನಾಡು ರಾಜ್ಯಪಾಲರೇ ತಮ್ಮದೇ ಸಭೆಯಿಂದ ಹೊರ‌ನಡೆಯುತ್ತಿದ್ದಾರೆ, ಕೇರಳ ರಾಜ್ಯಪಾಲರು ಸರ್ಕಾರದ ವಿರುದ್ದವೇ ಸತ್ಯಾಗ್ರಹ ಕೂಡುತ್ತಾರೆ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು.

ರಾಜಭವನ ದುರಪಯೋಗ
ಜುಲೈ 5 ರಂದು ಸಿಎಂ ಗೆ ರಾಜ್ಯಪಾಲರು ಪತ್ರ ಬರೆಯುತ್ತಾರೆ. ಮತ್ತೆ 15ನೇ ತಾರೀಖಿಗೆ‌ ಮತ್ತೊಂದು ಪತ್ರ ಬರೆಯುತ್ತಾರೆ‌. 26ರಂದು ಈ ಬಗ್ಗೆ ಸರ್ಕಾರ ನೂರು ಪುಟಗಳ ಉತ್ತರ ಸಲ್ಲಿಸಿದೆ. ಅದೇ ದಿನ ಅಬ್ರಾಹಂ ದೂರು ದಾಖಲಿಸಿದ ಕೂಡಲೇ ರಾಜ್ಯಪಾಲರು ಸಿಎಂ ಗೆ ನೋಟಿಸು ಕೊಡುತ್ತಾರೆ. ಸರ್ಕಾರದ ಉತ್ತರವನ್ನು ಕೂಡಾ ಪರಿಶೀಲನೆ ನಡೆಸದೆ, ಕೇವಲ ಖಾಸಗಿ ದೂರು ದಾಖಲಿಸಿದ ತಕ್ಷಣ‌ ಶೋಕಾಸ್ ನೋಟಿಸು ನೀಡಲಾಗಿದೆ.

ದೂರದಾರರ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಚಾರ, ಪ್ರಕರಣವೊಂದರಲ್ಲಿ‌ ಅವರಿಗೆ ಸುಪ್ರಿಂ ಕೋರ್ಟ್ ದಂಡ ಹಾಕಿದೆ. ಅಂತವರ ಮಾತು ರಾಜ್ಯಪಾಲರು ಕೇಳುತ್ತಾರೆ ಎಂದರೆ ಮೇಲಿನಿಂದ ಅವರಿಗೆ ಆದೇಶ ಬಂದಿದೆ. ರಾಜ್ಯಪಾಲರು ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ರಾಜಭವನ ದುರಪಯೋಗವಾಗುತ್ತಿದೆ ಎಂದು ಆರೋಪಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!