ಮುಡಾ ಹಗರಣ: ಸಿಎಂ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸೈಟ್​ಗಳನ್ನು ವಾಪಸ್ ನೀಡಿದ್ದಾರೆ.

ತಮಗೆ ನೀಡಿದ್ದ ಒಟ್ಟು 14 ನಿವೇಶನಗಳನ್ನು ವಾಪಸ್ ಮುಡಾಗೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಆ 14 ನಿವೇಶನಗಳ ಖಾತೆ ರದ್ದಾಗಿದೆ. ಖುದ್ದು ಸಿಎಂ ಪತ್ನಿ ಪಾರ್ವತಿ ಅವರೇ ಇಂದು(ಅಕ್ಟೋಬರ್ 01) ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ.

ಕಳೆದ ಒಂದು ದಿನದ ಹಿಂದೆಯಷ್ಟೇ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರು ತಮ್ಮ ಜಮೀನಿಗೆ ಬದಲಿಯಾಗಿ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ನೀಡಲಾಗಿದ್ದ 14 ನಿವೇಶ ವಾಪಸ್‌ ಪಡೆಯುವಂತೆ ಪತ್ರದಲ್ಲಿ ಮುಡಾ ಆಯುಕ್ತರಿಗೆ ಮನವಿ ಮಾಡಿದ್ದರು. ಪತ್ರ ಬರೆದ ಮರುದಿನವೇ ಮುಡಾ 14 ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!