ಮುಡಾ ಹಗರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ ಪತ್ನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ಸುಮಾರು 3 ಗಂಟೆಗಳ ಕಾಲ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಬಹಳ ಗೌಪ್ಯವಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಮುಡಾ ಹಗರಣದಲ್ಲಿ ಪಾರ್ವತಿ ಎ-2 ಆರೋಪಿಯಾಗಿದ್ದಾರೆ.

ಮುಡಾ’ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಎಫ್ ಐ ಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ-1, ಪತ್ನಿ ಪಾರ್ವತಿ ಎ-2 ಎಂದು ಹೆಸರಿಸಲಾಗಿದೆ. ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!