ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ತೀವ್ರ ಸಂಕಷ್ಟ ಎದುರಾಗಿದ್ದು , ಇದರ ಮಧ್ಯ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ ಎದೆಗುಂದಬೇಡಿ ಎಂದು ಶಾಸಕರು ಒಕ್ಕೋರೋಲಿನ ಬೆಂಬಲ ನೀಡಿ ನೈತಿಕ ಸ್ಥೈರ್ಯ ತುಂಬಿದರು.
ಇಂದು ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಸಿಎಂ ಸಿದ್ದರಾಮಯ್ಯಗೆ ಒಕ್ಕೋರಲ ಬೆಂಬಲ ಸೂಚಿಸಿದರು. CLP ಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ನೈತಿಕ ಸ್ಥೈರ್ಯ ತುಂಬಿದರು.
ಈ ವೇಳೆ ಸಿಎಂ ಸಿದ್ದರಾಮಯ ಅವರು ಬೆಂಬಲ ನೀಡಿದ ಸಚಿವರಿಗೆ, ಶಾಸಕರಿಗೆ ನನ್ನ ಪರವಾಗಿ ನೀವು ಹೋರಾಡುತ್ತಿದ್ದೀರಿ ನಿಮಗೆಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.