ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ.
ಇಂದು(ಸೆ.09) ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದರು. ಇನ್ನು ಸೆ.12ರಂದು ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮತ್ತೊಂದು ಸುತ್ತಿನ ವಾದ ಮಂಡನೆ ಮಾಡಲಿದ್ದಾರೆ. ಅಲ್ಲಿಯವರೆಗೆ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.