Monday, October 13, 2025

ಮುಡಾ ಸೈಟ್‌ ಹಂಚಿಕೆ ಹಗರಣ: ಮಾಜಿ ಆಯುಕ್ತ ದಿನೇಶ್‌ ಗೆ 9 ದಿನ ಇಡಿ ಕಸ್ಟಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಂಚಿಕೆ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಕೋರ್ಟ್‌ 9 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಮಂಗಳವಾರ(ಸೆ.16) ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದ ದಿನೇಶ್‌ ಕುಮಾರ್‌ ಅವರನ್ನು ಇಡಿ ಬಂಧಿಸಿತ್ತು. ರಾತ್ರಿ ನ್ಯಾಯಾಧೀಶರ ಮನೆ ಹಾಜರು ಪಡಿಸಿ 1 ದಿನ ಕಸ್ಟಡಿಗೆ ಪಡೆದುಕೊಂಡಿದ್ದ ಇಡಿ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿತು.

ಇಡಿ ಪರ ವಕೀಲರು ನಮಗೆ ತನಿಖೆಗೆ ಬೇಕಾದ ಅಗತ್ಯ ದಾಖಲೆಗಳು ಸಿಕ್ಕಿದ್ದು 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಎರಡು ಕಡೆಯ ವಾದ ಆಲಿಸಿದ ಕೋರ್ಟ್‌ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಸೆ. 26 ರಂದು ಸಂಜೆ 5 ಗಂಟೆಗೆ ದಿನೇಶ್‌ಕುಮಾರ್‌ ಅವರನ್ನು ಹಾಜರುಪಡಿಸಬೇಕು ಎಂದು ಇಡಿಗೆ ಸೂಚಿಸಿತು.

ದಿನೇಶ್‌ ಕುಮಾರ್‌ ಮೇಲಿರುವ ಆರೋಪ ಏನು?
ದಿನೇಶ್ ಕುಮಾರ್ ಆಯುಕ್ತರಾಗಿದ್ದ ಅವಧಿಯಲ್ಲಿ ಮಧ್ಯವರ್ತಿಗಳ ಮೂಲಕ 1000 ರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಬದಲಿ ನಿವೇಶನ ಹಂಚಿಕೆ ಪ್ರಕ್ರಿಯೆ ದಿನೇಶ್‌ ಕುಮಾರ್‌ ನೇತೃತ್ವದಲ್ಲಿ ನಡೆದಿದೆ. ನಿವೇಶನ ಹಂಚಿಕೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಬ್ಯಾಕ್‌ ವ್ಯವಹಾರದ ಮೂಲಕ ಸೈಟ್‌ ಹಂಚಿಕೆ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿವೆ ಎಂದು ಇಡಿ ಈ ಹಿಂದೆ ಹೇಳಿತ್ತು.

error: Content is protected !!