ಹೊಸದಿಗಂತ ಡಿಜಿಟಲ್ ಡೆಸ್ಕ್;
ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಸ್ನೇಹಮಯಿ ಕೃಷ್ಣ ಎಂಬುವರು ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ.
ಈ ಅರ್ಜಿಯ ವಿಚಾರಣೆಯನ್ನು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಡೆಸಲಿದ್ದಾರೆ.
ಕೆಲವೊಂದು ಅಂಶಗಳ ಇಟ್ಟು ವಾದ ಮಂಡನೆ ಮಾಡಿದ್ದೇವೆ. ಕೋರ್ಟ್ ಮತ್ತಷ್ಟು ವಾದ ಮಂಡನೆಗೆ ಅವಕಾಶ ನೀಡಿದ್ದರಿಂದ ಶುಕ್ರವಾರ ವಾದ ಮಂಡನೆ ಮಾಡಲಿದ್ದೇವೆ ಎಂದು ವಕೀಲ ವಂಸತ್ ಅವರು ತಿಳಿಸಿದರು.