ಸಿಎಂ ಸಿದ್ದರಾಮಯ್ಯಗೆ ‘ಮುಡಾ’ ಸಂಕಷ್ಟ: ಖಾಸಗಿ ದೂರು ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಲ್ಲಿಸಿದ್ದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈಗಾಗಲೇ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಇದರ ಬೆನ್ನಲ್ಲೇ ಮತ್ತೆ ಟಿಜೆ ಅಬ್ರಾಹಂ ಅವರು ಈ ಬಾರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ನೀಡಿದ್ದಾರೆ.

ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರ್ಕಾರ ಸಹ ನೋಟಿಸ್​ ವಾಪಸ್ ಪಡೆದುಕೊಂಡು ಅಬ್ರಾಹಂ ಅವರ ದೂರು ತಿರಸ್ಕರಿಸಬೇಕೆಂದು ಒಂದು ಸಾಲಿನ ನಿರ್ಣಯ ಅಂಗೀಕರಿಸಿದೆ. ಹೀಗಾಗಿ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ಇಲ್ಲ ಎನ್ನುವ ಕುತೂಹಲ ಮೂಡಿಸಿದೆ.

ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದು, ನಾಳೆ (ಆಗಸ್ಟ್ 13) ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸಬೇಕೋ ಬೇಡ್ವಾ ಎನ್ನುವ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ. ಇದರ ಮಧ್ಯ ಇದೀಗ ಅಬ್ರಾಹಂ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಿದ್ದರಾಮಯ್ಯ ಅವರು ಖಾಸಗಿ ದೂರು ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!