ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅನುಮೋದನೆ ನೀಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಹಲವು ಸಮಸ್ಯೆಗಳು ಎದುರಾಗಿವೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ಆರಂಭಿಸಿ, ತನಿಖೆಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ.
ಟಿ.ಜೆ.ಅಬ್ರಾಹಂ ನೀಡಿದ ದೂರಿಗೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅಲ್ಲದೆ ಟಿ.ಜೆ.ಅಬ್ರಾಹಂ ಅವರಿಗೆ ಬೆಳಿಗ್ಗೆ 10 ಗಂಟೆಗೆ ರಾಜಭವನಕ್ಕೆ ಬಂದು ಭೇಟಿಯಾಗಲು ರಾಜ್ಯಪಾಲರು ಸೂಚಿಸಿದ್ದಾರೆ.