ಹೊಸದಿಗಂತ ಹುಬ್ಬಳ್ಳಿ:
ಮುಡಾ ಹಾಗೂ ವಾಲ್ಮೀಕಿ ಹಗರಣಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವುದೇ ಕಾರಣಕ್ಕೂ ಪಾರಾಗಲು ಸಾಧ್ಯವಿಲ್ಲ. ಅವರು ರಾಜೀನಾಮೆ ನೀಡಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರಾಜೀನಾಮೆ ಹತ್ತಿರ ಬಂದಿರುವುದರಿಂದ ಆ ಪಕ್ಷದ ಕೆಲವು ನಾಯಕರು ಒಳಗೊಳಗೆ ಖುಷಿಯಲ್ಲಿ ಇದ್ದಾರೆ ಎಂದರು.
ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡುತ್ತಾರೋ ಇಲ್ವೋ ಎಂಬ ಚರ್ಚೆ ನಡೆದಿತ್ತು. ರಾಜ್ಯಪಾಲರು ಬೆಳಿಗ್ಗೆ ಪ್ರಾಸಿಕ್ಯೂಷನ್ ಗೆ ಕೊಟ್ಟಿದ್ದಾರೆ ಎಂಬುವುದು ತಿಳಿದು ಬಂದಿದೆ ಎಂದು ತಿಳಿಸಿದರು.
ಎರಡು ಹಗರಣಗಳ ವಿರೋಧಿಸಿ ಬಿಜೆಪಿ ಹೋರಾಟ ಮಾಡುತ್ತಿದ್ದೇವೆ. ಆದ್ದರಿಂದ ಸಿಎಂ ರಾಜೀನಾಮೆ ಹಾಗೂ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು.