ಅಮೃತ ಮಹೋತ್ಸವ ಸಮಿತಿ ಸಾರಥ್ಯದಲ್ಲಿ ಆಟಿದ ಅರಗಣೆಗೆ ಸಜ್ಜಾಗುತ್ತಿದೆ ಮುಡಿಪು ಭಾರತೀ ಶಾಲೆ!

ಹೊಸದಿಗಂತ ವರದಿ ಮುಡಿಪು:

ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಮುಡಿಪು ಶ್ರೀ ಭಾರತೀ ಶಾಲೆಯಲ್ಲಿ ಜು.23ರಂದು ಆದಿತ್ಯವಾರ ಶಾಲೆಯ ಅಮೃತ ಮಹೋತ್ಸವ ಸಮಿತಿ ನೇತೃತ್ವದಲ್ಲಿ “ಬಂಜಿದ ಬಡವುಗು, ಸರ್ರೊದ ಅನುಪಾನೊಗು ಆಟಿದ ಅರಗಣೆ” ಕಾರ್ಯಕ್ರಮ ನಡೆಯಲಿದೆ. ಶ್ರೀ ಭಾರತಿ ಎಜುಕೇಶನ್ ಟ್ರಸ್ಟ್ ಮುಡಿಪು ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯುವುದು.

ಅಂದು ಬೆಳಗ್ಗೆ 9.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ನರಸಿಂಹ ಹೆಗ್ಡೆ ಉದ್ಘಾಟಿಸುವರು. ಭಾರತ್ ಸ್ಕೌಟ್ಸ್ ಆಂಡ್ ಗೈಡ್ಸ್ ಸ್ಥಳೀಯ ಸಂಸ್ಥ ಮುಡಿಪು ಇದರ ಅಧ್ಯಕ್ಷ ರಮೇಶ್ ಶೇಣವ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕಿ ಡಾ.ಮಂಜುಳಾ ಶೆಟ್ಟಿ ಆಟಿಯ ವಿಶೇಷತೆ ಕುರಿತು ಉಪನ್ಯಾಸ ನೀಡುವರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ಹಾಜಿ ಕೋಡಿಜಾಲ್, ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ನಿಕಟಪೂರ್ವಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಕುರ್ನಾಡು ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಶಾಂತ್ ಕಾಜವ, ಮಂಗಳೂರು ಎಂಪಿಎಂಸಿ ಮಾಜಿ ಅಧ್ಯಕ್ಷ ಪ್ರಶಾಂತ್ ಗಟ್ಟಿ, ಮೆಸ್ಕಾಂ ಸಹಾಯಕ ಎಂಜಿನಿಯರ್ ನಾರಾಯಣ ಭಟ್ ಲಾಡ, ಮುಡಿಪು ಕುರ್ನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ಅರುಣ್ ಡಿಸೋಜ, ಸಾಂಬಾರ್ ತೋಟದ ಎಸ್.ಕೆ.ಟಿಂಬರ್ಸ್ ನ ಎಸ್.ಕೆ.ಖಾದರ್ ಹಾಜಿ, ಒಡಿಯೂರು ಗ್ರಾಮ ವಿಕಾಸ ಯೋಜನೆ ಸೇವಾ ಪ್ರತಿನಿಧಿ ಶಶಿಪ್ರಭಾ ಅತಿಥಿಗಳಾಗಿ ಪಾಲ್ಗೊಳ್ಳುವರು.

ಸಂಪೂರ್ಣ ಕಾರ್ಯ್ರಮದ ನಿರ್ವಹಣೆ ತುಳುವಿನಲ್ಲೇ ಸಂಪನ್ನಗೊಳ್ಳಲಿದೆ. ಈ ಸಮಾರಂಭದ ವಿಶೇಷತೆಯಾಗಿ ಬೆಳಗ್ಗೆ ಆಟಿ ವಿಶೇಷ ತಿಂಗಳ ತಿಂಡಿಗಳ ಉಪಾಹಾರ, ಪಾನಕ, 9 ರೀತಿಯ ಚಹಾ, ಹೋಳಿಗೆ, ಮಧ್ಯಾಹ್ನ ಬಾಳೆಲೆಯಲ್ಲಿ ಆಟಿದ ವಿಶೇಷ ಖಾದ್ಯಗಳೊಂದಿಗೆ ಸಹ ಭೋಜನ ಏರ್ಪಡಿಸಲಾಗಿದೆ.

ಆಟಿಯ ವಿಶೇಷ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹಳೆ ವಿದ್ಯಾರ್ಥಿ ಚಂದ್ರಹಾಸ ಕಣಂತೂರು ನೇತೃತ್ವದಲ್ಲಿ ತುಳು ಗಾದೆಗಳು, ರಸಪ್ರಶ್ನೆ ಕಾರ್ಯಕ್ರಮ, ಒಡಿಯೂರು ಗ್ರಾಮ ವಿಕಾಸ ಯೋಜನೆ ಸದಸ್ಯರಿಂದ ಶಾಲೆಯ ಆವರಣದಲ್ಲಿ ಕೈತೋಟ ನಿರ್ಮಾಣ ಕಾರ್ಯಕ್ರಮಗಳು ನಡೆಯಲಿವೆ.

ಜೊತೆಗೆ ಮುಡಿಪು ಭಾಗದ ಮೇಸ್ಕಾಂ ಪವರ್ ಮ್ಯಾನ್ ಗಳಿಗೆ ಸನ್ಮಾನ ಸಮಾರಂಭ ನೆರವೇರಲಿದೆ ಎಂದು ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಕೆ.ಆರ್., ಶ್ರೀ ಭಾರತಿ ಎಜುಕೇಶನ್ ಟ್ರಸ್ಟ್ ಸಂಚಾಲಕ ಕೆ.ಸುಬ್ರಹ್ಮಣ್ಯ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಶ್ಚಲ್ ಜಿ. ಶೆಟ್ಟಿ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!