ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೋಡಿಹಕ್ಕಿ’ ಸೀರಿಯಲ್ ಖ್ಯಾತಿಯ ನಟ ತಾಂಡವ್ ರಾಮ್ ಕೊಲೆ ಯತ್ನದ ಕೇಸ್‌ನಲ್ಲಿ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
‘ಮುಗಿಲ್ ಪೇಟೆ’ ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಕ್ಕೆ ಈಗ ಪೊಲೀಸರ ಅತಿಥಿಯಾಗಿದ್ದಾರೆ
ಮುಗಿಲ್ ಪೇಟೆ’ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ‘ಮುಗಿಲ್ ಪೇಟೆ’ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆ ಚಂದ್ರಲೇಔಟ್‌ನ ಕಚೇರಿಯಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿತ್ತು. ಆಗ ತಾಂಡವ್‌ಗೂ ಚಿತ್ರದ ನಿರ್ದೇಶಕ ಭರತ್‌ಗೂ ವಾಗ್ವಾದ ನಡೆದಿದೆ. ಈ ವೇಳೆ, ಸಿಟ್ಟಿನಿಂದ ಗನ್ ತೆಗೆದು ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ.