ದೇಶದ ಉಪರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ಫಿಕ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದ್ದು,ಹೀಗಾಗಿ ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ನಾಮ ನಿರ್ದೇಶನಕ್ಕೆ ಜು.17 ಕೊನೇ ದಿನ.
ಇನ್ನು ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವೂ ಅದೇ ದಿನ ಆಗಸ್ಟ್ 6ರಂದೇ ಹೊರಬೀಳಲಿದೆ.
ಜುಲೈ 24ಕ್ಕೆ ಈಗಿನ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಅಧಿಕಾರವಧಿ ಕೊನೆಗೊಳ್ಳಲ್ಲಿದ್ದು, ಜುಲೈ 18ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈಗಾಗಲೇ ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪತಿ ಮರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್​ ಸಿನ್ಹಾ ನಾಮಪತ್ರ ಸಲ್ಲಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!