February 12, 2026
Thursday, February 12, 2026
spot_img

ರಿಷಬ್ ಶೆಟ್ಟಿ ಹೊಸ ಸಿನಿಮಾಕ್ಕೆ ಮುಹೂರ್ತ ಫಿಕ್ಸ್: ಯಾವಾಗ? ಎಲ್ಲಿ? ಯಾವುದು? ಇಲ್ಲಿದೆ ಮಾಹಿತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಸಕ್ಸಸ್ ಬೆನ್ನಲ್ಲೇ ಮತ್ತೊಂದುಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ‘ಜೈ ಹನುಮಾನ್’ ಸಿನಿಮಾ ಕುರಿತು ಅತಿ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿದ್ದ ಈ ಸಿನಿಮಾದ ಮುಹೂರ್ತಕ್ಕೆ ಈಗ ದಿನಾಂಕ ಮತ್ತು ಸ್ಥಳ ಎರಡೂ ನಿಗದಿಯಾಗಿದೆ.

ತೆಲುಗಿನ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ವರ್ಮ ನಿರ್ದೇಶನದ ‘ಜೈ ಹನುಮಾನ್’ ಸಿನಿಮಾದ ಅದ್ದೂರಿ ಮುಹೂರ್ತವು ಫೆಬ್ರವರಿ 22 ರಂದು ವಿಶ್ವವಿಖ್ಯಾತ ಹಂಪಿಯಲ್ಲಿ ನೆರವೇರಲಿದೆ.

ಹಂಪಿಯು ಹನುಮಂತನ ಜನ್ಮಸ್ಥಳವಾದ ‘ಕಿಶ್ಕಿಂಧೆ’ ಎಂದು ನಂಬಲಾಗಿದ್ದು, ಈ ಪವಿತ್ರ ಭೂಮಿಯಲ್ಲೇ ಸಿನಿಮಾದ ಮೊದಲ ಪೂಜೆ ನಡೆಯುತ್ತಿರುವುದು ಚಿತ್ರದ ಮೇಲೆ ದೈವಿಕ ಮೆರುಗನ್ನು ನೀಡಿದೆ.

ಫೆಬ್ರವರಿ 22 ರಂದು ಹಂಪಿಯ ದಿವ್ಯ ಸನ್ನಿಧಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ವರ್ಮ ಮತ್ತು ಚಿತ್ರತಂಡದ ಪ್ರಮುಖರು ಭಾಗವಹಿಸಲಿದ್ದಾರೆ.

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹನುಮಂತ ದೇವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಅಪಾರ ಕುತೂಹಲ ಮೂಡಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ರಿಷಬ್ ಅವರ ಅವತಾರ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

‘ಪುಷ್ಪ’ ಮತ್ತು ‘ಪುಷ್ಪ 2’ ನಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವಿ ಮೇಕರ್ಸ್’ ಈ ಸಿನಿಮಾವನ್ನು ಅತ್ಯಂತ ದುಬಾರಿ ಬಜೆಟ್‌ನಲ್ಲಿ ನಿರ್ಮಿಸುತ್ತಿದೆ.

ಸದ್ಯದ ಮಾಹಿತಿಯ ಪ್ರಕಾರ, ಫೆಬ್ರವರಿಯಲ್ಲಿ ಮುಹೂರ್ತ ಮುಗಿಸಿ, ಏಪ್ರಿಲ್ ತಿಂಗಳಿನಿಂದ ‘ಜೈ ಹನುಮಾನ್’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಈ ಪಾತ್ರಕ್ಕಾಗಿ ರಿಷಬ್ ಶೆಟ್ಟಿ ವಿಶೇಷವಾಗಿ ತಮ್ಮ ದೇಹವನ್ನು ಹುರಿಗೊಳಿಸಿಕೊಂಡಿದ್ದು, ಶಾರೀರಿಕವಾಗಿ ದೊಡ್ಡ ಮಟ್ಟದ ಬದಲಾವಣೆ ಮಾಡಿಕೊಳ್ಳುತ್ತಿದ್ದಾರೆ. ಹನುಮಂತನ ಅತೀಂದ್ರಿಯ ಶಕ್ತಿಗಳನ್ನು ತೆರೆಯ ಮೇಲೆ ತರಲು ನಿರ್ದೇಶಕ ಪ್ರಶಾಂತ್ ವರ್ಮ ವಿಎಫ್‌ಎಕ್ಸ್ (VFX) ಕೆಲಸಗಳಿಗಾಗಿ ಈಗಾಗಲೇ ಒಂದು ವರ್ಷಕ್ಕೂ ಹೆಚ್ಚು ಸಮಯ ವ್ಯಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !