ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಮುಹೂರ್ತ ಫಿಕ್ಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶಿವಮೊಗ್ಗದಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 31ರಿಂದ ಬೆಂಗಳೂರು ಶಿವಮೊಗ್ಗ ಮಧ್ಯೆ ವಿಮಾನ ಸಂಚಾರ ಆರಂಭವಾಗುವ ಬಗ್ಗೆ ಮಾಹಿತಿ ದೊರೆತಿದ್ದು, ಈ ವಿಚಾರವಾಗಿ ಇಂಡಿಗೊ ವಿಮಾನಯಾನ ಸಂಸ್ಥೆಯ ವೆಬ್​ಸೈಟ್​ನಲ್ಲೂ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗಕ್ಕೆ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆಯ ಟಿಕೆಟ್ ಬುಕಿಂಗ್ ವಿಂಡೋದಲ್ಲಿರುವ ಮಾಹಿತಿಯಿಂದ ತಿಳಿದುಬಂದಿದೆ.

ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ ಬಂದು ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದರು. ಶಿವಮೊಗ್ಗದಿಂದ 4 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ದೊರೆತಿದೆ ಎಂದು ಹೇಳಲಾಗಿದ್ದರೂ ಸದ್ಯ ಶಿವಮೊಗ್ಗ ಬೆಂಗಳೂರು ಮಧ್ಯೆ ಮೊದಲಿಗೆ ವಿಮಾನ ಹಾರಾಟ ಆರಂಭವಾಗಲಿದೆ. ಆ ನಂತರ ಉಳಿದ ಮಾರ್ಗಗಳಲ್ಲಿಯೂ ಹಾರಾಟ ಆರಂಭಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!