Wednesday, August 17, 2022

Latest Posts

‘ಮಹಾ’ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್: ಯಾರೆಲ್ಲಾ ನೀಡಲಿದ್ದಾರೆ ಶಿಂಧೆಗೆ ಸಾಥ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾರಾಷ್ಟ್ರದಲ್ಲಿ ಏಕನಾಥ್​ ಶಿಂದೆ ಸರ್ಕಾರ ರಚನೆ ಬಳಿಕ ಇದೀಗ ಸಚಿವ ಸಂಪುಟದಲ್ಲಿ ಬಿಜೆಪಿಯ 25 ಹಾಗೂ ಶಿವಸೇನೆಯ 13 ಶಾಸಕರು ಮಂತ್ರಿ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 45 ಶಾಸಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಏಕನಾಥ್ ಶಿಂದೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೊರತುಪಡಿಸಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗ್ತಿದೆ. 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದೆ ಎಂಬ ಮಾಹಿತಿ ಇದೆ.
ಇತ್ತ ಈಗಾಗಲೇ ಶಿವಸೇನೆಯ ಬಂಡಾಯ 16 ಶಾಸಕರ ಅನರ್ಹತೆ ಪ್ರಶ್ನೆ ಮಾಡಿ ಶಿವಸೇನೆ ಈಗಾಗಲೇ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ಅದರ ವಿಚಾರಣೆ ಜುಲೈ 11ರಂದು ನಡೆಯಲಿದೆ. ಹೀಗಾಗಿ, ಮಹಾರಾಷ್ಟ್ರ ಸಚಿವ ಸಂಪುಟ ರಚನೆಗೆ ಸದ್ಯ ತಡೆ ನೀಡಲಾಗಿದೆ. ಸುಪ್ರೀಂಕೋರ್ಟ್​ನಿಂದ ಆದೇಶ ಹೊರಬೀಳುತ್ತಿದ್ದಂತೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!