ಹೊಸದಿಗಂತ ವರದಿ ವಿಜಯನಗರ:
ವಿಶ್ವ ವಿಖ್ಯಾತ ಹಂಪಿ ಉತ್ಸವವನ್ನು ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನೆರವೇರಿಸಲು ಸರ್ಕಾರ ನಿರ್ಧರಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದರು.
ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ.
ಹಂಪಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.