ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಾಲಿವುಡ್ ನಟ ರಾಮ್ ಚರಣ್ ಮತ್ತು ಉಪಾಸನಾ ದಂಪತಿ ಮಗುವಿಗೆ ನಾಮಕರಣ ಮಾಡಿದ್ದಾರೆ.
ಜೂನ್ 20ರಂದು ಬೆಳಗ್ಗೆ ಉಪಾಸನಾ ಹೈದರಾಬಾದ್ ಅಪೋಲೋ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಇಂದು ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮುದ್ದಾದ ಮಗುವಿಗೆ ಹೆಸರಿಟ್ಟಿದ್ದಾರೆ. ಮಗಳಿಗೆ ‘ಕ್ಲಿನ್ ಕಾರ ಕೊನಿಡೆಲಾ’ ಎಂದು ನಾಮಕರಣ ಮಾಡಿದ್ದಾರೆ. ಈ ಬಗ್ಗೆ ಚಿರಂಜೀವಿ ಕುಟುಂಬ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ರಾಮ್ ಚರಣ್ ಮತ್ತು ಉಪಾಸನಾ ದಂಪತಿಗೆ ಶುಭಾಶಯಗಳ ಸುರಿಮಳೆಯೇ ಹರಿದುಬಂದಿದೆ. ಇದರ ಜೊತೆಗೆ ಉದ್ಯಮಿ ಮುಖೇಶ್ ಅಂಬಾನಿ ಮಗುವಿಗೆ 1 ಕೋಟಿ ಬೆಲೆಯ ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದ್ದಾರೆ .
ಸಮಾರಂಭಕ್ಕೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ದಂಪತಿ 1 ಕೋಟಿ ರೂಪಾಯಿಯ ಚಿನ್ನದ ತೊಟ್ಟಿಲ್ಲನ್ನು ಕೊಟ್ಟಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ತೊಟ್ಟಿಲಿನ ವಿಡಿಯೋ ಕೂಡ ವೈರಲ್ ಆಗಿದೆ.ಆದರೆ ಇದು ನಿಜನಾ ಅಥವಾ ಫೇಕ್ ಎನ್ನುವ ಬಗ್ಗೆ ಇನ್ನು ಸ್ಪಷ್ಟನೆ ಸಿಕ್ಕಿಲ್ಲ.