ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಿಲಯನ್ಸ್ ಇಂಡಸ್ಟ್ರೀಸ್ನ ಡಿಜಿಟಲ್ ಅಂಗವಾದ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ನ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಲಿದ್ದಾರೆ.
ಇವರ ಸ್ಥಾನಕ್ಕೆ ಕಾರ್ಯನಿರ್ವಾಹಕೇತರ ನಿರ್ದೇಶಕ ಮತ್ತು ಮುಕೇಶ್ ಅವರ ಪುತ್ರ ಆಕಾಶ್ ಅಂಬಾನಿ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಮುಕೇಶ್ ಅಂಬಾನಿ ಜೂನ್ 27 ರಿಂದ (ಸೋಮವಾರ) ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮತ್ತೊಂದೆಡೆ, ಜಿಯೋ ಜೂನ್ 27, 2022 ರಿಂದ ಪ್ರಾರಂಭವಾಗುವ ಐದು ವರ್ಷಗಳ ಅವಧಿಗೆ ರಾಮಿಂದರ್ ಸಿಂಗ್ ಗುಜರಾತ್ ಮತ್ತು ಕೆ.ವಿ.ಚೌಧರಿ ಅವರನ್ನು ನಿರ್ದೇಶಕರನ್ನಾಗಿ ಹೆಸರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!