ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಯಾದವ್ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಅಪರ್ಣಾ ಅವರು ಬಿಜೆಪಿ ಸೇರಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಅಪರ್ಣಾ ಯಾದವ್ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಪತ್ನಿ. 2017ರ ವಿಧಾನಸಭೆ ಚುನಾವಣೆಯಲ್ಲಿ ಲಖನೌದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರೀಟಾ ಬಹುಗುಣ ಜೋಶಿ ವಿರುದ್ಧ ಸೋಲು ಅನುಭವಿಸಿದ್ದರು.