ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮುಲಾಯಂ ಸಿಂಗ್‌ ಯಾದವ್‌ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಮಾಜವಾದಿ ಪಕ್ಷದ ಸಂಸ್ಥಾಪಕ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿನ್ನೆ ಅನಾರೋಗ್ಯದ ಸಮಸ್ಯೆಯಿಂದ ವಿಧಿವಶರಾದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗ್ಗೆ 8.16ಕ್ಕೆ ಕೊನೆಯುಸಿರೆಳೆದರು. ಮುಲಾಯಂ ಸಿಂಗ್ ನಿಧನಕ್ಕೆ ಉತ್ತರಪ್ರದೇಶ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಇಂದು (ಮಂಗಳವಾರ) ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಮುಲಾಯಂ ಅವರ ಹುಟ್ಟೂರಾದ ಸೈಫೈಯಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.  ಮುಲಾಯಂ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಉತ್ತರ ಪ್ರದೇಶದ ಎಲ್ಲಾ ಭಾಗಗಳಿಂದ ಜನರು ಅವರ ಹುಟ್ಟೂರಿಗೆ ಆಗಮಿಸಿದ್ದರಿಂದ ಸೋಮವಾರ ಸಂಜೆಯೇ ಮುಲಾಯಂ ಅವರ ಪಾರ್ಥಿವ ಶರೀರವನ್ನು ಸೈಫೈ ಗ್ರಾಮಕ್ಕೆ ತರಲಾಯಿತು. ಅಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಂಗಳವಾರ ಸೈಫೈನಲ್ಲಿ ಮುಲಾಯಂ ಸಿಂಗ್ ಅವರ ಅಂತ್ಯಕ್ರಿಯೆಗೆ ಹಲವು ರಾಜ್ಯಗಳ ರಾಜಕೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮುಲಾಯಂ ಸಿಂಗ್ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!