ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್‌ ಗೆ ಪತ್ನಿ ವಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಹರಿಯಾಣದ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಾಧನಾ ಕಳೆದ ಮೂರು ತಿಂಗಳಿಂದ ಶ್ವಾಸಕೋಶದ ಸೋಂಕು ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮೂಲಗಳು ತಿಳಿಸಿವೆ.
ಸಾಧನಾ ಗುಪ್ತಾ ಅವರು ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿ ಹಾಗೂ ಪ್ರತೀಕ್‌ ಯಾದವ್‌ ಅವರ ತಾಯಿ.  ಮುಲಾಯಂ ಅವರ ಮೊದಲ ಪತ್ನಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ತಾಯಿ ಮಾಲ್ತಿ ದೇವಿ 2003 ರಲ್ಲಿ ನಿಧನರಾಗಿದ್ದರು.
“ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ದುಃಖತಪ್ತ ಕುಟುಂಬ ಸದಸ್ಯರೊಂದಿಗೆ ನನ್ನ ಸಂತಾಪವಿದೆ. ಭಗವಂತ ಶ್ರೀರಾಮನು ಅಗಲಿದ ಆತ್ಮಕ್ಕೆ ಅವರ ಪಾದದಡಿಯಲ್ಲಿ ಸ್ಥಾನ ನೀಡಲಿ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ. ಓಂ ಶಾಂತಿ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!