October 10, 2026
Saturday, October 10, 2026
spot_img

ಬಹುಕೋಟಿ ವಂಚನೆಯ ಪ್ರಕರಣ: ಆರೋಪಿ ಶಿವಾನಂದ್ ಬೆಳಗಾವಿಯಿಂದ ಬೆಂಗಳೂರಿಗೆ ಶಿಫ್ಟ್

ಹೊಸ ದಿಗಂತ ವರದಿ, ಬೆಳಗಾವಿ :

ಬಹುಕೋಟಿ ವಂಚನೆಯ ಆರೋಪಿ ಶಿವಾನಂದ ನಿಲಣ್ಣವರನ್ನು ಹತ್ತು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಮಂಗಳವಾರ ಮಹತ್ವದ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಬೆಳಗಾವಿಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿದ್ದ ಆರೋಪಿ ಶಿವಾನಂದ ನೀಲಣ್ಣವರ್‌ನನ್ನು ಸಿಐಡಿ ಅಧಿಕಾರಿಗಳ ತಂಡ ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಮುಂದಿನ ತನಿಖೆಗಾಗಿ ಸ್ಥಳಾಂತರ

ಬೆಳಗಾವಿಯಲ್ಲಿನ ಪ್ರಾಥಮಿಕ ಹಂತದ ವಿಚಾರಣೆ ಮತ್ತು ತನಿಖೆ ಪೂರ್ಣಗೊಂಡಿದ್ದು, ಹೀಗಾಗಿ ಅಧಿಕಾರಿಗಳು ಮುಂದಿನ ತನಿಖೆಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಹಗರಣದ ಆಳ-ಅಗಲ ತಿಳಿಯಬೇಕಾದರೆ ಬೆಂಗಳೂರಿನಲ್ಲೇ ಹೈವೋಲ್ವೇಜ್ ವಿಚಾರಣೆ ನಡೆಸಬೇಕು ಎಂದು ಅಧಿಕಾರಿಗಳು ಸ್ಥಳಾಂತರಕ್ಕೆ ಮುಂದಾಗಿದ್ದಾರೆ.

ಬಿಗಿಭದ್ರತೆಯಲ್ಲಿ ಬೆಂಗಳೂರಿಗೆ ಶಿಫ್ಟ್

ಸಿಐಡಿ ಅಧಿಕಾರಿಗಳು ಎರಡು ಪ್ರತ್ಯೇಕ ವಾಹನಗಳಲ್ಲಿ ಬೆಂಗಳೂರಿನತ್ತ ಸಾಗುತ್ತಿದ್ದು, ಮೊದಲನೇ ವಾಹನದಲ್ಲಿ ಕೇವಲ ಆರೋಪಿ ಶಿವಾನಂದ ನೀಲಣ್ಣವರ್‌ನನ್ನು ಕೂರಿಸಿಕೊಂಡು ಬರಲಾಗುತ್ತಿದ್ದರೆ, ಎರಡನೇ ವಾಹನದಲ್ಲಿ ಈ ಹಗರಣದಲ್ಲಿ ಜಪ್ತಿ ಮಾಡಲಾದ ನೂರಾರು ಮಹತ್ವದ ದಾಖಲೆಗಳು, ಕಂಪ್ಯೂಟರ್‌ಗಳು, ಲ್ಯಾಪ್‌ಟಾಪ್‌ಗಳು, ಪೆನ್‌ಡ್ರೈವ್ ಹಾಗೂ ಮೊಬೈಲ್ ಫೋನ್‌ಗಳನ್ನು ಈ ವಾಹನದಲ್ಲಿ ಬೆಂಗಳೂರಿಗೆ ತರಲಾಗುತ್ತಿದೆ.

Must Read