ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ತಿಳಿಸಿದೆ.
ಇಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದ್ದು, ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ನ್ಯಾಯಾಲಯಕ್ಕೆ ಜೂನ್ 21 ರಂದು ಪ್ರಾಸಿಕ್ಯೂಷನ್ ದೂರು ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚೆಗೆ ಇಡಿ 3.98 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.