April 17, 2026
Friday, April 17, 2026
spot_img

ಬಹುಕೋಟಿ ಅಕ್ರಮ ಹಣ ವರ್ಗಾವಣೆ ಕೇಸ್: ಆರೋಪಿ ಸುಕೇಶ್ ವಿರುದ್ಧ ಸಾಕ್ಷಿ ಹೇಳಲು ಮುಂದಾದ್ರ ನಟಿ ಜಾಕ್ವೆಲಿನ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸರಕಾರಿ ಸಾಕ್ಷಿಯಾಗಲು ನಿರ್ಧರಿಸಿದ್ದಾರೆ.

ಈ ಕುರಿತು ದೆಹಲಿ ನ್ಯಾಯಾಲಯದ ಮುಂದೆ ಜಾಕ್ವೆಲಿನ್ ಮನವಿಯನ್ನು ಸಲ್ಲಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೊಟೀಸ್ ನೀಡಿ ಅಭಿಪ್ರಾಯ ಕೇಳಿದೆ.

ಕೋರ್ಟ್ ಈ ಕೇಸ್ ಸಂಬಂಧ ಜಾಕ್ವೆಲಿನ್ ಫರ್ನಾಂಡಿಸ್ ಹೇಳಿಕೆ ದಾಖಲಿಸುವ ಮುನ್ನ , ನಟಿಯನ್ನು ಸರಕಾರಿ ಸಾಕ್ಷಿಯಾಗಿ ಪರಿಗಣಿಸಬೇಕೇ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸಲು ತನಿಖಾ ಸಂಸ್ಥೆಗೆ ಸೂಚಿಸಿದ್ದು, ಬಳಿಕ ಕೋರ್ಟ್ ಗೆ ಮಾಹಿತಿ ನೀಡಬೇಕಿದೆ. ಹೀಗಾಗಿ ಮುಂದಿನ ವಿಚಾರಣೆ ಏ . ೨೦ಕ್ಕೆ ಮುಂದೂಡಿದ್ದಾರೆ.

ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಬಂಧನವಾದ ನಂತರ ಜಾಕ್ವೆಲಿನ್ ತಮ್ಮ ಮೊಬೈಲ್‌ನಲ್ಲಿದ್ದ ಡೇಟಾವನ್ನು ಡಿಲೀಟ್ ಮಾಡಿದ್ದಾರೆ ಜೊತೆಗೆ ಹಣಕಾಸಿನ ವಹಿವಾಟಿನ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದರು ಎಂದು ತನಿಖಾ ಸಂಸ್ಥೆ ಹೇಳಿದೆ. ಈ ಸಂಬಂಧ ಹಲವು ಬಾರಿ ವಿಚಾರಣೆ ನಡೆಸಲಾಗಿತ್ತು.

ಇತ್ತ ಸುಕೇಶ್ ಚಂದ್ರಶೇಖರ್ ಕಡೆಯಿಂದ ಜಾಕ್ವೆಲಿನ್ ದುಬಾರಿ ಆಭರಣಗಳು, ಬಟ್ಟೆ ಮತ್ತು ವಾಹನಗಳನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂಬ ಆರೋಪ ಇದೆ . ಇದರ ನಡುವೆ ಜೈಲಿನಲ್ಲಿದ್ದರೂ ಕೂಡ ಸುಕೇಶ್ ಪದೇ ಪದೇ ಜಾಕ್ವೆಲಿನ್‌ಗೆ ಪ್ರೇಮ ಪತ್ರಗಳನ್ನು ಬರೆಯುತ್ತಿದ್ದು, ತಾನು ಆಕೆಯ ಬಾಯ್‌ಫ್ರೆಂಡ್ ಎಂದು ಹೇಳಿಕೊಳ್ಳುತ್ತಿದ್ದಾನೆ.

ಇದೀಗ ಜಾಕ್ವೆಲಿನ್ ಸಾಕ್ಷಿಯಾಗಲು ಮುಂದೆ ಬಂದಿರುವುದರಿಂದ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !