ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರ್ ಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬಿಟ್ ಕಾಯಿನ್ ಕೇಸ್ ನಲ್ಲಿ DySP ಶ್ರೀಧರ್ ಪೂಜಾರ್ 5ನೇ ಆರೋಪಿಯಾಗಿದ್ದು, ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಶೀಧರ್ ಪೂಜಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂಜಿ ಉಮಾ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ವಾದ ವಿವಾದದ ಬಳಿಕ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ