ಬಹುಕೋಟಿ ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 15ಕ್ಕೆ ಮುಂದೂಡಲಾಗಿದೆ. ಇದರಿಂದ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ನಟಿ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಸ್ನೇಹಿತ ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆಯಿಂದ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ.
ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ ಸದ್ಯ ಜೈಲಿನಲ್ಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವರನ್ನು ಬಂಧಿಸಲಾಗಿದೆ. ಆದರೆ, ಜಾಕ್ವೆಲಿನ್ ಬಂಧನ ಯಾಕಾಗಿಲ್ಲ ಎಂದು ಕೋರ್ಟ್ ನಿನ್ನೆಯಷ್ಟೇ ಪ್ರಶ್ನೆ ಮಾಡಿತ್ತು.

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ, ಇದರ ಪ್ರಮುಖ ಕಿಂಗ್ ಪಿನ್ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಸ್ನೇಹ ಹೊಂದಿದ್ದರು. ಅಲ್ಲದೇ, ಈ ಹಣದಲ್ಲೇ ನಟಿಗೆ ದುಬಾರಿ ವಸ್ತುಗಳನ್ನು ಸುಕೇಶ್ ನೀಡಿದ್ದಾರೆ ಎನ್ನುವ ಆರೋಪವಿದೆ.

ಆದರೆ ಈ ಎಲ್ಲ ಆರೋಪಗಳನ್ನೂ ಜಾಕ್ವೆಲಿನ್ ತಳ್ಳಿ ಹಾಕಿದ್ದಾರೆ. ಸುಕೇಶ್ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಅಲ್ಲದೇ, ಬಹುತೇಕ ವಸ್ತುಗಳನ್ನು ತಾವೇ ತಮ್ಮ ಸ್ವಂತ ಹಣದಲ್ಲೇ ಖರೀದಿಸಿರುವುದಾಗಿ ತಿಳಿಸಿದ್ದಾರೆ. ಹೀಗಾಗಿಯೇ ಜಾಮೀನಿಗೆ ಅವರು ಅರ್ಜಿ ಕೂಡ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!