ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಭಾಷಾ ನಟ ಹಾಗೂ ಇಂಡಿಯನ್ ಮೈಕೆಲ್ ಜಾಕ್ಸನ್ ಎಂದೇ ಪ್ರಸಿದ್ಧಿ ಪಡೆದಿರುವ ಡ್ಯಾನ್ಸ್ ಮಾಸ್ಟರ್ ಪ್ರಭುದೇವ್ ಕುಟುಂಬ ಸಮೇತರಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ಪ್ರಭುದೇವ್ ಅವರ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಎಲ್ಲವೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು.